KITCHEN TIPS
ಕೈಯಲ್ಲೇ ಊಟ ಮಾಡುವುದರಿಂದ ಆಗುವ ವೈಜ್ಞಾನಿಕ ಲಾಭಗಳು: ಡೈನಿಂಗ್ ಟೇಬಲ್ ಮೇಲೆ ಸ್ಫೂನ್ಸು, ಫೋರ್ಕ್ಸ್ ಬಂದು ಕೈಯಲ್ಲಿ ಭೋಜನ ಸವಿಯುವವರನ್ನು ಅನಾಗರೀಕರ ತರಹ ನೋಡುವ ಕಾಲ ಇದು. ತಿಂಡಿ ಏನೇ ಇದ್ದರೂ ಫೋರ್ಕ್ ಕಡ್ಡಾಯ ಎಂಬಂತಾಗಿದೆ. ಹೋಟೆಲ್‌ನಲ್ಲಿ ಯಾರಾದರೂ ಕೈಯಲ್ಲಿ ಊಟ ಮಾಡುತ್ತಿದ್ದರೆ ಅವರನ್ನು ವಿಚಿತ್ರವಾಗಿ ನೋಡುವ ಮನೋಭಾವ ಇದೆ. ಇನ್ನು ಮನೆಯಲ್ಲೂ ಅಷ್ಟೇ ಮಕ್ಕಳಿಗೆ ಸ್ಫೂನ್ ಅಭ್ಯಾಸ ಮಾಡುತ್ತಿದ್ದಾರೆ ತಂದೆತಾಯಿ. ಅದಕ್ಕೆ ಅವರು ಕೊಡುತ್ತಿರುವ ಮುಖ್ಯ ಕಾರಣ…ಕೈಗಳು ಸ್ವಚ್ಛವಾಗಿರಲ್ಲ ಅನ್ನೋದು. ಆದರೆ ಒಮ್ಮೆ ಕೈಯಲ್ಲಿ ಊಟ ಮಾಡುವುದರಿಂದ ಆಗುವ ವೈಜ್ಞಾನಿಕ ಲಾಭಗಳನ್ನು ನೋಡೋಣ. ಇದನ್ನು ಓದಿದ ಮೇಲೆ ನೀವು ಎಲ್ಲೇ ಇರಿ…? ನೀವು ಮಟ್ಟಸವಾಗಿ ಕೈಯನ್ನು ಉಪಯೋಗಿಸಿ ಭೋಜನ ಮಾಡುತ್ತೀರಿ ಎಂದು ಆಶಿಸುತ್ತೇವೆ. ಕೈಯಲ್ಲಿ ಆಹಾರ ತಿನ್ನಿವುದರಿಂದ ಆಗುವ ಪ್ರಯೋಜನಗಳು: ( As Per Science). 1. ಕೈ ಸ್ಪರ್ಶದಿಂದ ದೇಹದಲ್ಲಿ ಶಕ್ತಿ ಸಂಚಯವಾಗುತ್ತದೆ. 2. ಕೈಯಲ್ಲಿ ಆಹಾರ ತಿನ್ನುವುದರಿಂದ ಕೆಲವು ಮಿಲಿಯನ್ ನರಗಳು ನಮ್ಮ ಮಿದುಳಿಗೆ ಸಂಕೇತ ಕಳುಹಿಸುತ್ತವಂತೆ. 3. ಆಹಾರವನ್ನು ಕೈಯಲ್ಲಿ ಸ್ಪರ್ಶಿಸುತ್ತಿದ್ದಂತೆ, ಆಹಾರ ತೆಗೆದುಕೊಳ್ಳುವ ವಿಷಯ ಮಿದುಳು ಉದರಕ್ಕೆ ಸಂಕೇತ ರವಾನಿಸುತ್ತದೆ. ಆಗ ಹೊಟ್ಟೆಯಲ್ಲಿ ಜೀರ್ಣ ರಸಗಳು, ಎಂಜೈಮ್‌ಗಳು ಬಿಡುಗಡೆಯಾಗಿ ಜೀರ್ಣಕ್ರಿಯೆ ಸುಗಮವಾಗಿ ಆಗುತ್ತದೆ. 4. ಕೈಯಲ...